ರಾಹುಲ್ ಗಾಂಧಿ ಮಗುವಲ್ಲ, ದೇಶದ ಗೌರವಕ್ಕೆ ಧಕ್ಕೆ ತರಬಾರದು; ಸಚಿವ ಕಿರಣ್ ರಿಜಿಜು
ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ನಮ್ಮ ದೇಶದ ಆರ್ಥಿಕತೆ "ಸತ್ತಿದೆ" ಎಂದು ತಿಳಿದಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ನವದೆಹಲಿ, ಆಗಸ್ಟ್ 1: “ರಾಹುಲ್ ಗಾಂಧಿ ನಮ್ಮ ದೇಶದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇದು ಸರಿಯಲ್ಲ. ರಾಹುಲ್ ಗಾಂಧಿ (Rahul Gandhi) ಬುದ್ಧಿಯಿಲ್ಲದ ಮಗುವೇನಲ್ಲ. ಅವರು ದೇಶದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕೆಗೆ ಬೆಂಬಲ ನೀಡಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ತರಾಟೆಗೆ ತೆಗೆದುಕೊಂಡರು. “ರಾಹುಲ್ ಗಾಂಧಿ ತಾವು ಮಗುವಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶದ ಗೌರವ ಮತ್ತು ಪ್ರತಿಷ್ಠೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ವಿರೋಧ ಪಕ್ಷದ ನಾಯಕನಿಗೆ ಇಷ್ಟಾದರೂ ತಿಳುವಳಿಕೆ ಇರಬೇಕು” ಎಂದು ಅವರು ಹೇಳಿದ್ದಾರೆ.
ಗುರುವಾರ, ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ನಮ್ಮ ದೇಶದ ಆರ್ಥಿಕತೆ “ಸತ್ತಿದೆ” ಎಂದು ತಿಳಿದಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

