AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ

ಪ್ರಸನ್ನ ಗಾಂವ್ಕರ್​
| Edited By: |

Updated on: Jun 09, 2026 | 11:42 AM

Share

ರಾಹುಲ್ ಗಾಂಧಿ ಅವರು ದಿವಂಗತ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಅವರ ನಿವಾಸಕ್ಕೆ ಅವರು ಭೇಟಿ ನೀಡಿದ್ದು, ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಕರ್ನಾಟಕದ ಹಲವು ಹಿರಿಯ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಇದ್ದರು.

ಬೆಂಗಳೂರು, ಜೂನ್​​ 09: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಿವಂಗತ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ರಾಹುಲ್ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಜರಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಕೂಡ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More