ಚುನಾವಣಾ ಆಯೋಗದ ಕಚೇರಿ ಚಲೋ: ಆಕಾಶವಾಣಿ ಭವನದ ಬಳಿ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ತಡೆದ ದೆಹಲಿ ಪೊಲೀಸರು
ದೆಹಲಿಯಲ್ಲಿ ‘ಇಂಡಿ’ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ (ECI) ಕಚೇರಿಯತ್ತ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸದರು ಸಂಸತ್ ಭವನದಿಂದ ನಿರ್ವಾಚನ ಸದನದ ಕಡೆಗೆ ಪಾದಯಾತ್ರೆ ಆರಂಭಿಸಿದ್ದರು.
ನವದೆಹಲಿ, ಅಕ್ಟೋಬರ್ 06:ದೆಹಲಿಯಲ್ಲಿ ‘ಇಂಡಿ’ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ (ECI) ಕಚೇರಿಯತ್ತ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸದರು ಸಂಸತ್ ಭವನದಿಂದ ನಿರ್ವಾಚನ ಸದನದ ಕಡೆಗೆ ಪಾದಯಾತ್ರೆ ಆರಂಭಿಸಿದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ನಿಯೋಗವು ಆಕಾಶವಾಣಿ ಭವನ ಮತ್ತು ನೀತಿ ಆಯೋಗದ ಗೇಟ್ ಬಳಿ ತಲುಪುತ್ತಿದ್ದಂತೆ, ಪೊಲೀಸರು ಬ್ಯಾರಿಕೇಡ್ ಹಾಕಿ ಅವರನ್ನು ತಡೆದರು. ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಸುತ್ತಮುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ