ವೋಟ್ ಚೋರಿ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಆಳಂದ ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ತೆಗೆದಿಲ್ಲ. ಅಂಬೇಡ್ಕರ್ ಸೋಲಿನಿಂದ ದೇಶದಲ್ಲಿ ವೋಟ್ ಚೋರಿ ಶುರುವಾಗಿದೆ ಎಂದಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 13: ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಂಬೇಡ್ಕರ್ ಸೋಲಿನಿಂದ ದೇಶದಲ್ಲಿ ವೋಟ್ ಚೋರಿ ಶುರುವಾಗಿದೆ. ಕಾಂಗ್ರೆಸ್ ಪಾರ್ಟಿಯಲ್ಲೇ ಎಸ್ಐಆರ್ ಆಗಬೇಕು. ಅಂದ್ರೆ ಮಾತ್ರ ಕಾಂಗ್ರೆಸ್ ಉಳಿಯುತ್ತದೆ. ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರು ತೆಗೆದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ರಾಹುಲ್ ಗಾಂಧಿಗೆ ಬಿ.ಆರ್.ಪಾಟೀಲ್ ಹೆಸರು ಗೊತ್ತೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
