AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಲಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ! ವೈರಲ್ ವಿಡಿಯೋಗೆ ಕನ್ನಡಿಗರ ಆಕ್ರೋಶ

ರ‍್ಯಾಲಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ! ವೈರಲ್ ವಿಡಿಯೋಗೆ ಕನ್ನಡಿಗರ ಆಕ್ರೋಶ

ಸುಷ್ಮಾ ಚಕ್ರೆ
|

Updated on:Oct 12, 2026 | 6:46 PM

Share

ಸಾವಿರಾರು ಕಾರ್ಯಕರ್ತರ ಜೊತೆ ಸುಪ್ರೀಂ ಕೋರ್ಟ್​ನತ್ತ ಹೊರಟಿದ್ದ ಈ ರ‍್ಯಾಲಿಯಲ್ಲಿ ತೀವ್ರ ನೂಕುನುಗ್ಗಲು ಉಂಟಾಯಿತು. ರಾಹುಲ್ ಗಾಂಧಿಯವರನ್ನೂ ಕಾಂಗ್ರೆಸ್ ಕಾರ್ಯಕರ್ತರು ತಳ್ಳಾಡಿದರು. ಈ ವೇಳೆ ಅವರ ಪಕ್ಕದಲ್ಲಿಯೇ ಇದ್ದ ಸಿಎಂ ಡಿಕೆ ಶಿವಕುಮಾರ್ ಕಾರ್ಯಕರ್ತರ ತಳ್ಳಾಟದಲ್ಲಿ ಕೆಳಗೆ ಬೀಳುವಂತಾದರು. ಬೆಳಗ್ಗೆಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮೊದಲೇ ಸುಸ್ತಾದಂತಿದ್ದ ಡಿಕೆ ಶಿವಕುಮಾರ್ ಅವರಿಗೆ ಆ ತಳ್ಳಾಟದಲ್ಲಿ ನಿಲ್ಲಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ಅವರ ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ರಾಹುಲ್ ಗಾಂಧಿಯವರ ವರ್ತನೆಯಿಂದ ಕಾರ್ಯಕರ್ತರ ನಡುವೆ ಸಿಲುಕಿದ ಡಿಕೆ ಶಿವಕುಮಾರ್ ನಿಯಂತ್ರಣ ತಪ್ಪಿ ಕೆಳಗೆ ಬೀಳುವಂತಾದರು. ಸುತ್ತಲೂ ಸಾವಿರಾರು ಜನ ಮೆರವಣಿಗೆಯಲ್ಲಿ ಸಾಗುತ್ತಿದ್ದ ಕಾರಣದಿಂದ ಡಿಕೆ ಶಿವಕುಮಾರ್ ಅವರಿಗೆ ಆ ಜನಜಂಗುಳಿಯಿಂದ ಹೊರಗೆ ಬರಲೂ ಕೂಡ ಸಾಧ್ಯವಾಗಲಿಲ್ಲ.

ನವದೆಹಲಿ, ಅಕ್ಟೋಬರ್ 12: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್​ಐಆರ್​ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟ ಇಂದು ಸುಪ್ರೀಂ ಕೋರ್ಟ್​ಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ. ಈ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಸಾವಿರಾರು ಕಾರ್ಯಕರ್ತರ ಜೊತೆ ಸುಪ್ರೀಂ ಕೋರ್ಟ್​ನತ್ತ ಹೊರಟಿದ್ದ ಈ ರ‍್ಯಾಲಿಯಲ್ಲಿ ತೀವ್ರ ನೂಕುನುಗ್ಗಲು ಉಂಟಾಯಿತು. ರಾಹುಲ್ ಗಾಂಧಿಯವರನ್ನೂ ಕಾಂಗ್ರೆಸ್ ಕಾರ್ಯಕರ್ತರು ತಳ್ಳಾಡಿದರು. ಈ ವೇಳೆ ಅವರ ಪಕ್ಕದಲ್ಲಿಯೇ ಇದ್ದ ಸಿಎಂ ಡಿಕೆ ಶಿವಕುಮಾರ್ ಕಾರ್ಯಕರ್ತರ ತಳ್ಳಾಟದಲ್ಲಿ ಕೆಳಗೆ ಬೀಳುವಂತಾದರು. ಬೆಳಗ್ಗೆಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮೊದಲೇ ಸುಸ್ತಾದಂತಿದ್ದ ಡಿಕೆ ಶಿವಕುಮಾರ್ ಅವರಿಗೆ ಆ ತಳ್ಳಾಟದಲ್ಲಿ ನಿಲ್ಲಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ಅವರ ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ರಾಹುಲ್ ಗಾಂಧಿಯವರ ವರ್ತನೆಯಿಂದ ಕಾರ್ಯಕರ್ತರ ನಡುವೆ ಸಿಲುಕಿದ ಡಿಕೆ ಶಿವಕುಮಾರ್ ನಿಯಂತ್ರಣ ತಪ್ಪಿ ಕೆಳಗೆ ಬೀಳುವಂತಾದರು. ಸುತ್ತಲೂ ಸಾವಿರಾರು ಜನ ಮೆರವಣಿಗೆಯಲ್ಲಿ ಸಾಗುತ್ತಿದ್ದ ಕಾರಣದಿಂದ ಡಿಕೆ ಶಿವಕುಮಾರ್ ಅವರಿಗೆ ಆ ಜನಜಂಗುಳಿಯಿಂದ ಹೊರಗೆ ಬರಲೂ ಕೂಡ ಸಾಧ್ಯವಾಗಲಿಲ್ಲ.

ಕರ್ನಾಟಕದ ಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿಕೊಂಡ ರೀತಿಗೆ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಡಿಕೆ ಶಿವಕುಮಾರ್ ಕಾಲ್ತುಳಿತಕ್ಕೆ ಸಿಲುಕುವಂತಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಒಂದು ರಾಜ್ಯದ ಮುಖ್ಯಮಂತ್ರಿಯವರಿಗೆ ನೀಡುವ ಗೌರವ, ಮರ್ಯಾದೆ ಇದೇನಾ? ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 12, 2026 06:45 PM

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More