Video: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ: ರಾಹುಲ್ ಗಾಂಧಿ

Updated on: Mar 30, 2026 | 10:13 AM

ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಭಾನುವಾರ ರಾಹುಲ್ ಗಾಂಧಿ ಆರೋಪಿಸಿದರು.ಇಂದಿಗೂ ಸಹ, ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.

ಅಹಮದಾಬಾದ್, ಮಾರ್ಚ್​ 30: ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದು ಬಿಜೆಪಿ ಗುರಿಯಾಗಿಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಸ್ತುತ ಆಡಳಿತದಲ್ಲಿ ಈ ಸಮುದಾಯಗಳ ವಿರುದ್ಧ ತಾರತಮ್ಯ ಹೆಚ್ಚುತ್ತಿದೆ ಎಂದು ಭಾನುವಾರ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇಂದಿಗೂ ಸಹ, ದಲಿತರು ಮತ್ತು ಆದಿವಾಸಿಗಳನ್ನು ಕ್ರೂರವಾಗಿ ಥಳಿಸಲಾಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಬೇಕು, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು ಮತ್ತು ಸಿಇಒ ಆಗಬೇಕು ಎಂದು ನಾವು ಬಯಸುತ್ತೇವೆ. ಇದು ನಮ್ಮ ಹೋರಾಟ ಎಂದರು.

ಒಬ್ಬ ವ್ಯಕ್ತಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಅವರ ದೇಹದಾದ್ಯಂತ 19 ಮುರಿತಗಳು ಸಂಭವಿಸಿವೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಎತ್ತುವವರು ಹೆಚ್ಚಾಗಿ ಭಾರೀ ಬೆಲೆ ತೆರಬೇಕಾಗುತ್ತಿದೆ ಎಂದು ದೂರಿದರು. ಇವರ ಹೇಳಿಕೆಗೆ ನೆಟ್ಟಿಗರು ಸರಿಯಾಗಿ ಉತ್ತರ ನೀಡಿದ್ದಾರೆ. ಅಧಿಕಾರದಲ್ಲಿದ್ದರು, ಬುಡಕಟ್ಟು ಜನಾಂಗದವರಿಗೆ ಎಷ್ಟು ಪ್ರಾತಿನಿಧ್ಯ ನೀಡಿದ್ದರು? ಅವರ ಪ್ರದೇಶಗಳಲ್ಲಿ ನಕ್ಸಲಿಸಂ ಏಕೆ ಹೆಚ್ಚಾಯಿತು ಎಂದು ಪ್ರಶ್ನಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Mar 30, 2026 10:13 AM
Follow Us