ಎಡವಟ್ಟಾಯ್ತು!; ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ

ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು (ಸೆಪ್ಟೆಂಬರ್ 25) ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ ಮಾಡುವಾಗ ಎಡವಟ್ಟು ಮಾಡಿದ್ದಾರೆ. "ಕಾಶ್ಮೀರಿ ಪಂಡಿತರು" ಎನ್ನುವ ಬದಲು "ಪಿಓಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ನಿರಾಶ್ರಿತರು" ಎಂದು ಹೇಳಿದ್ದಾರೆ. ತಕ್ಷಣ ತಮ್ಮ ತಪ್ಪಿನ ಅರಿವಾಗಿ ಆ ಹೇಳಿಕೆಯನ್ನು ಸರಿಪಡಿಸಿಕೊಂಡಿದ್ದಾರೆ.

ಎಡವಟ್ಟಾಯ್ತು!; ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
|

Updated on: Sep 25, 2024 | 7:31 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣದ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಪಿಒಕೆಯಿಂದ ಬಂದಿರುವ ನಿರಾಶ್ರಿತರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೀಡಿದ ಭರವಸೆಯನ್ನು ಈಡೇರಿಸಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ನಂತರ ತಕ್ಷಣ ತಮ್ಮ ತಪ್ಪನ್ನು ತಿದ್ದಿಕೊಂಡ ಅವರು ಕ್ಷಮೆ ಕೇಳಿದ್ದಾರೆ. ಪಿಓಕೆ ನಿರಾಶ್ರಿತರು ಎಂದು ಬಾಯ್ತಪ್ಪಿ ಹೇಳಿದ್ದನ್ನು ಸರಿಪಡಿಸಿಕೊಂಡ ಅವರು “ಕಾಶ್ಮೀರಿ ಪಂಡಿತರಿಗೆ ನೀಡಿದ ಭರವಸೆ” ಎಂದು ಬದಲಾಯಿಸಿಕೊಂಡಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us