ಬಸ್​ ಸ್ಟಾಪ್​​ನಲ್ಲಿ ಯುವತಿಗೆ Love you ಎಂದ ರಾಹುಲ್​ ಗಾಂಧಿ

Updated on: May 08, 2023 | 11:14 AM

ಬಸ್​​ ಸ್ಟಾಪ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯರು ರಾಹುಲ್​ ಗಾಂಧಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರವ ವೇಳೆ ರಾಹುಲ್​ ಗಾಂಧಿ ಓರ್ವ ಯುವತಿಗೆ Love you ಅಂದಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಸಂಬಂಧ ನಿನ್ನೆ (ಮೇ.07) ರಿಂದ ರಾಜ್ಯ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ರವಿವಾರ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದರು. ಬಳಿಕ ಬಸ್​​ ಸ್ಟಾಪ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯರು ರಾಹುಲ್​ ಗಾಂಧಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಈ ವೇಳೆ ರಾಹುಲ್​ ಗಾಂಧಿ ಓರ್ವ ಯುವತಿಗೆ Love you ಅಂದರು.

Published on: May 08, 2023 11:14 AM
Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More