ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕೈಹಿಡಿದೆಳೆದು ಪಕ್ಕ ಕೂರಿಸಿಕೊಂಡರು!

|

Updated on: Oct 09, 2023 | 6:02 PM

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲಿ ಜಾತಿ ಜನಗಣತಿ ನಡೆಸಲು ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ, ಸಭೇಯಲ್ಲಿ ಒಂದೇಒಂದು ಭಿನ್ನಾಭಿಪ್ರಾಯ ವ್ಯಕ್ತವಾಗಲಿಲ್ಲ ಎಂದು ರಾಹುಲ್ ಹೇಳಿದರು.

ನವದೆಹಲಿ: ರಾಜಧಾನಿಯಲ್ಲಿಂದು ಮಹತ್ವದ ಕಾರ್ಯಕಾರಿಣಿ ಸಭೆ (CWC meeting) ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿತು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲಿ ಜಾತಿ ಜನಗಣತಿ ನಡೆಸಲು ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ, ಸಭೇಯಲ್ಲಿ ಒಂದೇಒಂದು ಭಿನ್ನಾಭಿಪ್ರಾಯ ವ್ಯಕ್ತವಾಗಲಿಲ್ಲ ಎಂದು ರಾಹುಲ್ ಹೇಳಿದರು. ಗೋಷ್ಟಿ ಆರಂಭವಾಗುವ ಮೊದಲು ನಡೆದ ಒಂದು ಸ್ವಾರಸ್ಯಕರ ಸಂಗತಿಯನ್ನು ಇಲ್ಲಿ ವೀಕ್ಷಿಸಬಹುದು. ಸುದ್ದಿಗೋಷ್ಟಿಯಲ್ಲಿ ರಾಹುಲ್ ಗಾಂಧಿ ಕುಳಿತ ಬಳಿಕ ಅವರ ಬಲಭಾಗದಲ್ಲಿ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂರುತ್ತಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆ ಒಂದೆರಡು ಕ್ಷಣ ತಡವಾಗಿ ಆಗಮಿಸುವ ಸಿದ್ದರಾಮಯ್ಯ ಅವರನ್ನು (Siddaramaiah) ರಾಹುಲ್ ಪಕ್ಕ ಕೂರುವಂತೆ ವೇಣಿಗೋಪಾಲ್ ಹೇಳಿದರೂ ಕೂರೋದೋ ಬೇಡ್ವೋ ಅಂತ ಕರ್ನಾಟಕದ ಮುಖ್ಯಮಂತ್ರಿ ಮೀನಮೇಷ ಎಣಿಸುತ್ತಾರೆ. ಪ್ರಾಯಶಃ ಅವರ ಗೊಂದಲ ಗಮನಿಸುವ ರಾಹುಲ್, ಸಿದ್ದರಾಮಯ್ಯರ ಕೈಹಿಡಿದೆಳೆದು ತಮ್ಮ ಪಕ್ಕ ಕೂರಿಸಿಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ