ಬೆಂಗಳೂರು: ಗ್ರಾಹಕರ ಜೊತೆ ಕಾಫಿ ಸವಿದು, ಬಿಎಂಟಿಸಿ ಬಸ್​​ನಲ್ಲಿ ಸಂಚರಿಸಿದ ರಾಹುಲ್​ ಗಾಂಧಿ

ವಿವೇಕ ಬಿರಾದಾರ

Updated on: May 08, 2023 | 9:53 AM

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಿಗ್ಗೆ ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಸಂಬಂಧ ನಿನ್ನೆ (ಮೇ.07) ರಿಂದ ರಾಜ್ಯ ಪ್ರವಾಸದಲ್ಲಿದ್ದಾರೆ. ನಗರದಲ್ಲಿ ರವಿವಾರ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದಿದ್ದಾರೆ. ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.