ಚುನಾವಣೆಯಲ್ಲಿ ಅಕ್ರಮ; ರಾಹುಲ್ ಗಾಂಧಿ ನೇತೃತ್ವದಲ್ಲಿ ಆ. 5ರಂದು ಪ್ರತಿಭಟನೆ: ಡಿಕೆ ಶಿವಕುಮಾರ್
ರಾಹುಲ್ ಗಾಂಧಿ ಬೆಂಗಳೂರಿಗೆ ಬರುವ ಮೊದಲು ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅಗಮಿಸಲಿದ್ದು ಅವರು ಶಾಸಕರ ಮತ್ತು ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಸುರ್ಜೇವಾಲಾ ಬೆಂಗಳೂರಿಗೆ ಬರೋದು ಶಾಸಕರೊಂದಿಗೆ ಮೀಟಿಂಗ್ ನಡೆಸೋದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಕನ್ನಡಿಗರ ಗಮನಕ್ಕೆ ಬರುತ್ತಿದೆ.
ಬೆಂಗಳೂರು, ಜುಲೈ 30: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar), ಕೆಪಿಸಿಸಿಯ ಸಂಶೋಧನಾ ತಂಡ ಲೋಕಸಭಾ ಚುನಾವಣೆಯಲ್ಲಿ ಕೆಲವು ಅಕ್ರಮಗಳು ನಡೆದಿರುವುದನ್ನು ಪತ್ತೆ ಮಾಡಿದೆ ಮತ್ತು ವಿಷಯವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಗಮನಕ್ಕೆ ತರಲಾಗಿದೆ, ಇದೇ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ಬಂದು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು. ಅವರ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಎಲ್ಲ ಮಂತ್ರಿಗಳು, ಪಕ್ಷದ ಶಾಸಕರು, ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಭಾಗಿಯಾಗಬೇಕೆಂದು ಒಂದು ಸಭೆಯನ್ನು ನಡೆಸಿ ಸೂಚಿಸಲಿದ್ದೇನೆ ಎಂದು ಶಿವಕುಮಾರ್ ಹೇಳಿದರು.
ಇದನ್ನೂ ಓದಿ: ಅನಪೇಕ್ಷಿತ ಅವಮಾನಗಳನ್ನು ಅವಡುಗಚ್ಚಿ ಅದುಮಿಕೊಳ್ಳುವುದು ಶಿವಕುಮಾರ್ಗೆ ಅನಿವಾರ್ಯವೇ?
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

