AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 4 ರಂದು ಬೆಂಗಳೂರಲ್ಲಿ ಚುನಾವಣೆ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಲಿದ್ದಾರೆ: ಪರಮೇಶ್ವರ್

ಆಗಸ್ಟ್ 4 ರಂದು ಬೆಂಗಳೂರಲ್ಲಿ ಚುನಾವಣೆ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಲಿದ್ದಾರೆ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 30, 2025 | 12:30 PM

Share

ಪ್ರತಿಭಟನೆ ನಡೆಸಬಾರದು ಅಂತ ರಾಜ್ಯ ಉಚ್ಚ ನ್ಯಾಯಾಲಯ 2022ರಲ್ಲಿ ತೀರ್ಪು ನೀಡಿರುವುದರಿಂದ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಲಾರರು, ರಾಹುಲ್ ಭೇಟಿಯ ರೂಪುರೇಷೆಗಳನ್ನು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಇನ್ನೂ ಅಂತಿಮಗೊಳಿಸಿಲ್ಲ ಎಂದು ಪರಮೇಶ್ವರ್ ಹೇಳಿದರು. ಮೈಸೂರು ಡ್ರಗ್ಸ್ ತಯಾರಿಕಾ ಘಟಕದ ಪ್ರಕರಣವನ್ನು ಮುಂಬೈ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಬೆಂಗಳೂರು, ಜುಲೈ 30: ಚುನಾವಣೆಗಳಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಸಂಸತ್​ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Leader of Opposition in LS Rahul Gandhi) ಅಗಸ್ಟ್ 4 ರಂದು ಬೆಂಗಳೂರುಗೆ ಆಗಮಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುವಾಗ ಅಕ್ರಮ ನಡೆದಿದೆ ಎಂದು ಹೇಳಿರುವ ರಾಹುಲ್ ರಾಜ್ಯ ಚುನಾವಣಾ ಅಯೋಗಕ್ಕೆ ಮನವಿ ಪತ್ರವೊಂದನ್ನು ಸಲ್ಲಿಸುವ ಮೊದಲು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ, ಇದೇ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯು ಕೆಲ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ:  ಮೈಸೂರಲ್ಲಿ ಡ್ರಗ್ಸ್ ತಯಾರಿಕಾ ಘಟಕ; ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ: ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ