AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ : ಎಸ್‌ಐಆರ್ ವಿವಾದ, ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ತಂತ್ರ

ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ : ಎಸ್‌ಐಆರ್ ವಿವಾದ, ಚುನಾವಣಾ ಆಯೋಗದ ವಿರುದ್ಧ ಹೋರಾಟಕ್ಕೆ ತಂತ್ರ

ನಯನಾ ರಾಜೀವ್
|

Updated on: Oct 13, 2026 | 8:53 AM

Share

ರಾಹುಲ್ ಗಾಂಧಿ ಅವರು ವಿಪಕ್ಷ ಸಂಸದರಿಗಾಗಿ ದೆಹಲಿ ನಿವಾಸದಲ್ಲಿ ಹೈ-ಟೀ ಆಯೋಜಿಸಿದರು. ಎಸ್‌ಐಆರ್ ವಿವಾದ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಹಾಗೂ ಚುನಾವಣಾ ಆಯೋಗದ ವಿರುದ್ಧದ ಮುಂದಿನ ಹೋರಾಟದ ಕುರಿತು ಸಮಾಲೋಚನೆ ನಡೆಯಿತು. ಈ ನಡುವೆ ಕಾಂಗ್ರೆಸ್‌ನ ಪ್ರತಿಭಟನೆಯನ್ನು ಬಿಜೆಪಿ ನಾಟಕ ಎಂದು ಟೀಕಿಸಿ, ಜನತೆಯ ವಿಶ್ವಾಸ ಗಳಿಸಲು ಸವಾಲು ಹಾಕಿದೆ.

ನವದೆಹಲಿ, ಅಕ್ಟೋಬರ್ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ತಮ್ಮ ನಿವಾಸದಲ್ಲಿ ವಿಪಕ್ಷಗಳ ಸಂಸದರಿಗಾಗಿ ಹೈ-ಟೀ ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಎಸ್‌ಐಆರ್ ವಿವಾದ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಮತ್ತು ಚುನಾವಣಾ ಆಯೋಗದ ವಿರುದ್ಧದ ಭವಿಷ್ಯದ ಹೋರಾಟದ ರೂಪರೇಷೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಭೋಜನಕೂಟದ ನಂತರ ರಾಹುಲ್ ಗಾಂಧಿ ಅವರು ಈ ಟೀ ಪಾರ್ಟಿಯನ್ನು ಆಯೋಜಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಕಂಡುಬಂದಿರುವ ಲೋಪದೋಷಗಳ ಕುರಿತು ಮತ್ತು ಮುಂದಿನ ಹೆಜ್ಜೆಗಳ ಬಗ್ಗೆ ರಾಹುಲ್ ಗಾಂಧಿ ಅವರು ಇತರ ನಾಯಕರೊಂದಿಗೆ ಸಮಾಲೋಚಿಸಿದರು.

ಈ ಬೆಳವಣಿಗೆಗಳ ಮಧ್ಯೆ, ಎಸ್‌ಐಆರ್ ವಿರುದ್ಧದ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಮೊದಲು ನಾಟಕ ನಿಲ್ಲಿಸಿ ಮತ್ತು ಪ್ರತಿಭಟನೆ ಮಾಡುವ ಬದಲು ತಾಕತ್ತಿದ್ದರೆ ಜನರ ವಿಶ್ವಾಸ ಗೆಲ್ಲಿ ಎಂದು ರಾಜ್ಯ ಬಿಜೆಪಿ ನಾಯಕರು ಸವಾಲು ಹಾಕಿದ್ದಾರೆ. ಎಸ್‌ಐಆರ್‌ನಿಂದ ಯಾರಿಗೆ ಅನ್ಯಾಯವಾಗಿದೆ ಎಂದು ಪ್ರಶ್ನಿಸಿದ ಬಿಜೆಪಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಥವಾ ಖರ್ಗೆ ಅವರ ಹೆಸರುಗಳನ್ನು ಎಸ್‌ಐಆರ್ ಪಟ್ಟಿಯಿಂದ ಕೈಬಿಡಲಾಗಿದೆಯೇ ಎಂದು ಕೇಳಿದೆ. ಸಂವಿಧಾನದ ವ್ಯವಸ್ಥೆಯ ಪ್ರೋಟೋಕಾಲ್‌ಗಳ ಬಗ್ಗೆ ತಿಳುವಳಿಕೆ ಇಲ್ಲದೆ ಕಾಂಗ್ರೆಸ್ ನಾಯಕರು ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆಕ್ಷೇಪಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More