ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲಿಂಗಸುಗೂರಿನಲ್ಲಿ ನಿಗದಿತ ಹೆಲಿಪ್ಯಾಡ್ ಬದಲು ಬೇರೆಡೆ ಲ್ಯಾಂಡ್ ಆಗಿ ಗೊಂದಲ ಸೃಷ್ಟಿಸಿತ್ತು. ಈ ಭದ್ರತಾ ವೈಫಲ್ಯದ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇವಲ ಒಬ್ಬ ಪಿಎಸ್‌ಐ ಭದ್ರತೆಯಲ್ಲಿ ಸಿಎಂ ಮದುವೆಗೆ ತೆರಳಿದ್ದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಕಾರಣಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.
ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್ನಲ್ಲಿ ಲ್ಯಾಂಡಿಂಗ್ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಗೆ ತಾಂತ್ರಿಕ ಕಾರಣನಾ, ಬೇರೆ ಕಾರಣನಾ ಅಂತಾ ವಿಚಾರಣೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

