AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!

ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!

ಭೀಮೇಶ್​​ ಪೂಜಾರ್
| Edited By: |

Updated on: Oct 06, 2026 | 1:57 PM

Share

ರಾಯಚೂರಿನಲ್ಲಿ ಅದ್ಧೂರಿಯಾಗಿ ನಡೆದ ಗಣೇಶೋತ್ಸವ ಯಶಸ್ಸಿಗೆ ವಿವಿಧ ಇಲಾಖೆಗಳ ಶ್ರಮ ಶ್ಲಾಘನೀಯ. ಕಾನೂನು ಸುವ್ಯವಸ್ಥೆ, ವಿದ್ಯುತ್ ನಿರ್ವಹಣೆ, ಸ್ವಚ್ಛತಾ ಕಾರ್ಯಕ್ಕೆ ಎಲ್ಲರೂ ಸಹಕರಿಸಿದ್ದಾರೆ. ದುಬೈ-ಇಸ್ರೇಲ್ ವಿಮಾನದಲ್ಲಿ ಪ್ರಯಾಣಿಕರ ಜೀವ ಉಳಿಸಿದ ವೀರ ಪೈಲಟ್ ಸ್ಮಿತ್ ಮಚ್ಚರ್ ಅವರಿಗೆ ವಿಸರ್ಜನಾ ಮೆರವಣಿಗೆಯಲ್ಲಿ ವಿಶೇಷ ಗೌರವ ಸಲ್ಲಿಸಲಾಯಿತು.

ರಾಯಚೂರು, ಅಕ್ಟೋಬರ್ 06: ಜಿಲ್ಲೆಯಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಅತ್ಯಂತ ವಿನೂತನವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲೆಯಾದ್ಯಂತ ಪ್ರತಿಷ್ಠಾಪಿಸಲಾಗಿದ್ದ 2,000ಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ಯಶಸ್ವಿಯಾಗಿ ವಿಸರ್ಜನೆ ಮಾಡಲಾಯಿತು. ಈ ಬೃಹತ್ ಆಚರಣೆಯು ಆರಂಭದಿಂದ ಅಂತ್ಯದವರೆಗೂ ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ, ಜೆಸ್ಕಾಂ, ಮಹಾನಗರಪಾಲಿಕೆ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿಷ್ಠಾವಂತ ಕರ್ತವ್ಯ ನಿರ್ವಹಣೆ ಪ್ರಮುಖ ಕಾರಣವಾಗಿದೆ. ಗಜಾನನ ಮಂಡಳಿಗಳು ಹಾಗೂ ರಾಯಚೂರಿನ ನಾಗರಿಕರು ಈ ಎಲ್ಲಾ ಇಲಾಖೆಗಳ ಸಹಕಾರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ವಿಶೇಷವಾಗಿ, 21 ದಿನಗಳ ಕಾಲ ಪೂಜಿಸಲ್ಪಟ್ಟ ಹಿಂದೂ ಮಹಾಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ವೀರ ಪೈಲಟ್ ಸ್ಮಿತ್ ಮಚ್ಚರ್ ಅವರ ಭಾವಚಿತ್ರಗಳು ರಾರಾಜಿಸಿದವು. ದುಬೈನಿಂದ ಇಸ್ರೇಲ್​ಗೆ ತೆರಳುತ್ತಿದ್ದ ವಿಮಾನದಲ್ಲಿ ಕೋ-ಪೈಲಟ್‌ನಿಂದ ಹಲ್ಲೆಗೊಳಗಾಗಿದ್ದರೂ ಆತ್ಮಸ್ಥೈರ್ಯ ಕಳೆದುಕೊಳ್ಳದೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಿ ಪ್ರಯಾಣಿಕರ ಜೀವ ಉಳಿಸಿದ ಅವರ ಅಪ್ರತಿಮ ಧೈರ್ಯಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿತ್ತು. ಅವರ ತ್ಯಾಗ ಮತ್ತು ಸಾರ್ವಜನಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಲು ಮೆರವಣಿಗೆಯಲ್ಲಿ ಶಾಲಾ ಹೊದಿಸಿ, ಶ್ರೀಗಳ ಆಶೀರ್ವಚನದ ಮೂಲಕ ಗೌರವ ಸಲ್ಲಿಸಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More