ಸರ್ಕಾರಿ ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಮಕ್ಕಳ ಯೂನಿಫಾರ್ಮ್, ಪಠ್ಯಪುಸ್ತಕ ಬೆಂಕಿಗಾಹುತಿ

Edited By:

Updated on: Jun 28, 2026 | 4:26 PM

ಮುಖ್ಯಾಂಶಗಳು

  • ಬುದ್ಧಿ ಹೇಳಿದಕ್ಕೆ ಇಷ್ಟೊಂದು ದ್ವೇಷನಾ?
  • ಸರ್ಕಾರಿ ಶಾಲೆಗೇ ಬೆಂಕಿ ಹಚ್ಚಿದ ಕಿಡಿಗೇಡಿಗಳು!
  • ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಗ್ರಾಮಸ್ಥರು ಆಗ್ರಹ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗುಂಟ್ರಾಳ ಗ್ರಾಮದ ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಅನೈತಿಕ ಚಟುವಟಿಕೆಗಳನ್ನು ನಡೆಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಶಾಲಾ ಮಕ್ಕಳ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳು ಸುಟ್ಟು ಭಸ್ಮವಾಗಿವೆ. ಗ್ರಾಮಸ್ಥರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ರಾಯಚೂರು, ಜೂನ್​​ 28: ಜಿಲ್ಲೆಯ ದೇವದುರ್ಗ ತಾಲೂಕಿನ ಗುಂಟ್ರಾಳ ಗ್ರಾಮದ ಸರ್ಕಾರಿ ಶಾಲೆಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಅನೈತಿಕ ಚಟುವಟಿಕೆ ನಡೆಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಕೃತ್ಯ ಎಸಗಲಾಗಿದೆ. ಶಾಲೆಯ ಆವರಣದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಲ್ಲಿ ತೊಡಗಿದ್ದರು. ಅಲ್ಲದೆ, ಇತ್ತೀಚೆಗೆ ಶಾಲೆಯ ಬೀಗ ಒಡೆದು ಒಳಗಡೆ ಮಲಗಿದ್ದರು. ಈ ಬಗ್ಗೆ ಶಾಲೆಯ ಎಸ್​ಡಿಎಂಸಿ ಸದಸ್ಯರು ಮತ್ತು ಶಿಕ್ಷಕರು ಅವರಿಗೆ ತಾಕೀತು ಮಾಡಿದ್ದರು. ಈ ಬುದ್ಧಿವಾದವನ್ನು ಸಹಿಸದ ಕಿಡಿಗೇಡಿಗಳು ನಿನ್ನೆ ರಾತ್ರಿ ಶಾಲೆಯ ಬೀಗ ಮುರಿದು ಒಳನುಗ್ಗಿ, ಬೆಂಕಿ ಹಚ್ಚಿದ್ದು ಬಡ ಮಕ್ಕಳ ಸ್ಕೂಲ್ ಸಮವಸ್ತ್ರಗಳು, ಪಠ್ಯಪುಸ್ತಕಗಳು ಬೆಂಕಿಗೆ ಆಹುತಿ ಆಗಿವೆ. ಈ ದುಷ್ಕೃತ್ಯದಿಂದ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಗಬ್ಬೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More