ರಾಯಚೂರಿನಲ್ಲಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ

Edited By: ವಿವೇಕ ಬಿರಾದಾರ

Updated on: Jun 08, 2025 | 9:46 PM

ರಾಯಚೂರು ಜಿಲ್ಲೆಯ ಜಾಗಿರ ವೆಂಕಟಾಪುರದ ಹಳ್ಳದ ಮೇಲಿನ ಸೇತುವೆ ಭಾರಿ ಮಳೆಯಿಂದ ಕೊಚ್ಚಿ ಹೋಗಿದೆ. ಫತ್ತೇಪುರ ಮತ್ತು ಜಾಗಿರ ವೆಂಕಟಾಪುರ ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದೆ. ಕಳೆದ ವರ್ಷ ಇದೇ ಸೇತುವೆಯಲ್ಲಿ ಒಬ್ಬರು ಕೊಚ್ಚಿ ಹೋಗಿದ್ದರು. ಹೊಸ ಸೇತುವೆ ನಿರ್ಮಾಣ ಆರಂಭವಾಗಿದ್ದರೂ, ಹಳೆಯ ಸೇತುವೆ ಕುಸಿದಿರುವುದರಿಂದ ಜನರು ಪರದಾಡುತ್ತಿದ್ದಾರೆ. ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಾಯಚೂರು ಜಿಲ್ಲೆಯ ರಾಯಚೂರು ತಾಲೂಕಿನ ಜಾಗಿರ ವೆಂಕಟಾಪುರ ಗ್ರಾಮದ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ. ಸತತ ಎರಡು ಗಂಟೆಗಳ ಕಾಲ ಸುರಿದ ಭಾರಿ‌ ಮಳೆಗೆ ಹಳ್ಳದ ಸೇತುವೆ ಕೊಚ್ಚಿ ಹೋಗಿದೆ. ಇದರಿಂದ ಫತ್ತೇಪುರ ಹಾಗೂ ಜಾಗಿರ ವೆಂಕಟಾಪುರ ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದೆ. ಸೇತುವೆ ಕೊಚ್ಚಿ ಹೋಗಿರುವುದರಿಂದ ಜನ ಪರದಾಡುತ್ತಿದ್ದಾರೆ. ಕಳೆದ ವರ್ಷ ಇದೇ ಸೇತುವೆ ಮೇಲೆ ಹರಿದ ಹಳ್ಳದ ನೀರಿನಲ್ಲಿ ಓರ್ವ ಬ್ಯಾಂಕ್ ಸಿಬ್ಬಂದಿ ಕೊಚ್ಚಿ ಹೋಗಿದ್ದರು. ಹೀಗಾಗಿ, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಹೊಸ ಸೇತುವೆ ಕಾಮಗಾರಿ ಆರಂಭವಾಗಿದೆ. ಈ ಮಧ್ಯೆ ಹಳೆ ಸೇತುವೆ ಕೊಚ್ಚಿ ಹೋಗಿರುವ ಹಿನ್ನೆಲೆ ಸಂಚಾರ ಬಂದ್ ಆಗಿದೆ. ವಾಹನಗಳು ಸಂಚಾರ ಸ್ಥಗಿತವಾಗಿದ್ದರಿಂದ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

Loading...
Unable to load recommendations.
Follow Us
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More