ಮೊಬೈಲ್ ಕಳ್ಳತನ ವಿಚಾರಕ್ಕೆ ನಡುರಸ್ತೆಯಲ್ಲಿ ಎರಡು ಗುಂಪುಗಳ ಹೊಡೆದಾಟ 

Edited By:

Updated on: Feb 22, 2025 | 3:33 PM

ಮಸ್ಕಿ ತಾಲೂಕಿನ ಬೇಡರಕಾರಲಕುಂಟೆ ಗ್ರಾಮದಲ್ಲಿ ಹಳೆಯ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಮಂಜುನಾಥ ಮತ್ತು ರಮೇಶ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಗುಂಪುಗಳು ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಿಸಿವೆ.

ರಾಯಚೂರು, ಫೆಬ್ರವರಿ 22: ಮಸ್ಕಿ ತಾಲೂಕಿನ ಬೇಡರಕಾರಲಕುಂಟೆ ಗ್ರಾಮದಲ್ಲಿ ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿರುವಂತಹ (fight) ಘಟನೆ ನಡೆದಿದೆ. ನಡುರಸ್ತೆಯಲ್ಲಿಯೇ ಮನಬಂದಂತೆ 2 ಗುಂಪುಗಳು ಬಡಿದಾಡಿಕೊಂಡಿವೆ. ಮೊಬೈಲ್ ಕಳ್ಳತನ ವಿಚಾರಕ್ಕೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಮಂಜುನಾಥ್, ರಮೇಶ್​ ಎಂಬುವವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More