Government Free Milk Powder Scam: ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ

Updated on: Jul 18, 2026 | 12:00 PM

ಮಕ್ಕಳ ಪೌಷ್ಟಿಕತೆಗಾಗಿ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಗೆ ದೊಡ್ಡ ಹಿನ್ನಡೆಯಾಗಿದ್ದು, ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹವಾಗಿರುವುದು ಪತ್ತೆಯಾಗಿದೆ. ದೇವದುರ್ಗ ಮಾರ್ಗದಲ್ಲಿರುವ ಶೆಡ್ ಒಂದರಲ್ಲಿ 38 ಚೀಲಗಳಷ್ಟು ಹಾಲಿನ ಪುಡಿ ಸಿಕ್ಕಿದ್ದು, ಸ್ಥಳೀಯ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು, ಜುಲೈ 18: ಮಕ್ಕಳ ಪೌಷ್ಟಿಕತೆಗಾಗಿ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಗೆ ದೊಡ್ಡ ಹಿನ್ನಡೆಯಾಗಿದ್ದು, ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹವಾಗಿರುವುದು ಪತ್ತೆಯಾಗಿದೆ. ದೇವದುರ್ಗ ಮಾರ್ಗದಲ್ಲಿರುವ ಶೆಡ್ ಒಂದರಲ್ಲಿ 38 ಚೀಲಗಳಷ್ಟು ಹಾಲಿನ ಪುಡಿ ಸಿಕ್ಕಿದ್ದು, ಸ್ಥಳೀಯ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸಬೇಕಿತ್ತು. ಆದರೆ, ಅದು ದನದ ಕೊಟ್ಟಿಗೆಯ ಪಕ್ಕದಲ್ಲಿ ಅವ್ಯವಸ್ಥಿತವಾಗಿ ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಅಕ್ಷರ ದಾಸೋಹ ಅಧಿಕಾರಿಗಳು ಪೊಲೀಸರಿಗೆ ಸೂಕ್ತ ಮಾಹಿತಿ ನೀಡದೆ ನುಣುಚಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಕೆಎಂಎಫ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯೇ ಈ ಹಗರಣಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ವಾರ ಕೊಪ್ಪಳದಲ್ಲೂ ಇದೇ ರೀತಿಯ ಘಟನೆ ವರದಿಯಾಗಿತ್ತು. ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us