ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

Edited By:

Updated on: Dec 22, 2025 | 10:53 PM

ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಆನ್‌ಲೈನ್ ಗೇಮಿಂಗ್ ವಂಚನೆಯ ಕುರಿತು ಮಾಹಿತಿ ನೀಡಿದ್ದಾರೆ. Instagram ರೀಲ್ಸ್‌ ಮೂಲಕ ಬಂದ ಲಿಂಕ್‌ವೊಂದನ್ನು ಕ್ಲಿಕ್ ಮಾಡಿದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು 30 ಲಕ್ಷ ರೂ ಕಳೆದುಕೊಂಡಿದ್ದಾರೆ. ಈ ಪ್ರಕರಣವನ್ನು ಡಿಸೆಂಬರ್ 12ರಂದು ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಯಚೂರು, ಡಿಸೆಂಬರ್​ 22: ಸ್ಮಾರ್ಟ್ ಫೋನ್, ಅದರಲ್ಲೂ ಇನ್ಸ್ಟಾಗ್ರಾಮ್​ ಬಳಸುವ ಪ್ರತಿಯೊಬ್ಬರು ಈ ವಿಡಿಯೋವನ್ನು ನೋಡಲೇಬೇಕು. ಜಿಲ್ಲೆಯಲ್ಲಿ ಆನ್‌ಲೈನ್ ಗೇಮಿಂಗ್ ವಂಚನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಕಂಪನಿಯ ಉದ್ಯೋಗಿ ಬರೋಬ್ಬರಿ 30 ಲಕ್ಷ ರೂ ಕಳೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್​​​ ​ರೀಲ್ಸ್‌ ವೀಕ್ಷಿಸುತ್ತಿರುವಾಗ ಬಂದ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ. ಆ ಲಿಂಕ್ ಅವರನ್ನು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದಿದ್ದು, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದೆ. ಪ್ರಾರಂಭದಲ್ಲಿ ಕಡಿಮೆ ಮೊತ್ತ ಹೂಡಿಕೆ ಮಾಡಿದವರು, ಕ್ರಮೇಣ 30 ಲಕ್ಷ ರೂ ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Dec 22, 2025 10:48 PM