ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಮಲಗಿದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮಗೆ ಕಚ್ಚಿದೆ. ಹಾವು ಕಡಿತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾವು ಕಚ್ಚುತ್ತಿದ್ದಂತೆ ಯಲ್ಲಮ್ಮ ಥಟ್ಟನೆ ಎದ್ದು ಕುಳಿತುಕೊಂಡು ಹಾವನ್ನು ಹೊಡೆಯಲು ಯತ್ನಿಸಿರುವುದು ದೃಶ್ಯದಲ್ಲಿ ಕಾಣಿಸುತ್ತದೆ. ಸದ್ಯ ಯಲ್ಲಮ್ಮ ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು, ಮಾರ್ಚ್ 14: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆಲೆ ಮನೆಯ ಹೊರಾಂಗಣದಲ್ಲಿ ಮಲಗಿದ್ದರು. ಈ ವೇಳೆ ಕಪ್ಪೆಯನ್ನು ಅಟ್ಟಾಡಿಸಿಕೊಂಡು ಬಂದ ಹಾವು ಹಾಸಿಗೆಯೊಳಗೆ ನುಗ್ಗಿ ಯಲ್ಲಮ್ಮಗೆ ಕಚ್ಚಿದೆ. ಹಾವು ಕಡಿತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾವು ಕಚ್ಚುತ್ತಿದ್ದಂತೆ ಯಲ್ಲಮ್ಮ ಥಟ್ಟನೆ ಎದ್ದು ಕುಳಿತುಕೊಂಡು ಹಾವನ್ನು ಹೊಡೆಯಲು ಯತ್ನಿಸಿರುವುದು ದೃಶ್ಯದಲ್ಲಿ ಕಾಣಿಸುತ್ತದೆ. ಸದ್ಯ ಯಲ್ಲಮ್ಮ ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us