AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾವೇ ಮಣ್ಣು ತರಿಸಿ ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸರು

Video: ತಾವೇ ಮಣ್ಣು ತರಿಸಿ ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸರು

ಅಕ್ಷಯ್​ ಪಲ್ಲಮಜಲು​​
|

Updated on:Oct 25, 2025 | 5:58 PM

Share

ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ನಿರ್ವಹಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ PSI ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ

ರಾಯಚೂರು, ಅ.25: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳ ಸಮಸ್ಯೆಗೆ ರಾಯಚೂರು ಟ್ರಾಫಿಕ್ ಪೊಲೀಸರು (Raichur traffic police) ಶಾಶ್ವತ ಪರಿಹಾರ ಕಂಡುಕೊಂಡಿದ್ದಾರೆ. ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ಮಾಡಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್​​​ಐ ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಇದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಈ ರಸ್ತೆ ಗುಂಡಿಗಳು ಅಪಘಾತಗಳಿಗೆ ಕಾರಣವಾಗುತ್ತಿದ್ದವು, ಆದರೆ ಪೊಲೀಸರ ಈ ಕಾರ್ಯವು ಅಪಾಯಗಳನ್ನು ತಪ್ಪಿಸಿದೆ. ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಈ ಜನಪರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ನಿಯಂತ್ರಣದ ಜೊತೆಗೆ ನಾಗರಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಒತ್ತು ನೀಡಿದ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 25, 2025 05:58 PM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More