ರಾಯಚೂರು: ಬಯಲಾಟದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳು ಸಾವು, ತಾಯಿ-ಮಗಳ ಕಾಲು ಕಟ್!

Edited By:

Updated on: Apr 18, 2026 | 2:46 PM

ರಾಯಚೂರು ಜಿಲ್ಲೆಯ ಬೈಲ್ ಮರ್ಚಡ್ ಗ್ರಾಮದಲ್ಲಿ ಬಯಲಾಟ ವೀಕ್ಷಿಸುತ್ತಿದ್ದವರ ಮೇಲೆ ಹಳೆಯ ಕಟ್ಟಡದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಹೃದಯವಿದ್ರಾವಕ ಘಟನೆ ನಡೆದಿದೆ. ವಿಶ್ವನಾಥ್ (8) ಹಾಗೂ ಸನ್ವಿತಾ (1.6) ಎಂಬ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ತಮ್ಮ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಗಾಯಾಳುಗಳಿಗೆ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು, ಏ.18: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಹೃದಯವಿದ್ರಾವಕ ಘಟನೆಯಲ್ಲಿ, ಹಳೆಯ ಕಟ್ಟಡದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಕಾಲುಗಳು ಕತ್ತರಿಸಲ್ಪಟ್ಟಿವೆ. ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಯಲಾಟವನ್ನು ನೋಡಲು ಗ್ರಾಮಸ್ಥರೆಲ್ಲರೂ ಸಂಭ್ರಮದಿಂದ ಜಮಾಯಿಸಿದ್ದರು. ಈ ವೇಳೆ ಅನೇಕರು ಗ್ರಾಮದ ಚಾವಡಿ ಕಟ್ಟೆಯ ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಹಳೆಯದಾಗಿದ್ದ ಚಾವಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಸಿಮೆಂಟ್‌ನ ನಾಮಫಲಕದ ಬೋರ್ಡ್ ಆಯತಪ್ಪಿ ಕೆಳಗೆ ಕುಳಿತಿದ್ದವರ ಮೇಲೆ ಬಿದ್ದಿದೆ. ಇನ್ನು ಮೃತರನ್ನು ವಿಶ್ವನಾಥ್ (8 ವರ್ಷ) ಹಾಗೂ ಸನ್ವಿತಾ (1.6 ವರ್ಷ) ಎಂದು ಗುರುತಿಸಲಾಗಿದೆ. ದುರಂತದ ತೀವ್ರತೆಗೆ ಸಿಮೆಂಟ್ ಬೋರ್ಡ್ ಅಡಿಯಲ್ಲಿ ಸಿಲುಕಿದ ಬಸಮ್ಮ (38) ಅವರ ಒಂದು ಕಾಲು ಕಟ್‌ ಆಗಿದ್ದರೆ, ಅವರ ಮಗಳು ಲಕ್ಷ್ಮಿ (17) ಅವರ ಎರಡು ಕಾಲುಗಳು ಕಟ್‌ ಆಗಿವೆ. ಇವರ ಜೊತೆಗೆ ವಿಶಾಲಮ್ಮ (20) ಮತ್ತು 4 ವರ್ಷದ ಮಗು ಯಲ್ಲಮ್ಮ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More