ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ ನೋಡಿ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನದ ಕೊರತೆಯಿಂದಾಗಿ ವೃದ್ಧೆಯ ಅಂತ್ಯಕ್ರಿಯೆಯನ್ನು ತುಂಗಭದ್ರಾ ನದಿಯ ನಡುಗಡ್ಡೆ ಪ್ರದೇಶದಲ್ಲಿ ಮಾಡಲಾಗಿದೆ. ಗ್ರಾಮಸ್ಥರು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಮೃತದೇಹವನ್ನು ಹೊತ್ತು ಸಾಗಿದರು. ಪ್ರತಿ ಮಳೆಗಾಲದಲ್ಲಿ ಇದೇ ರೀತಿ ಪರಿಸ್ಥಿತಿ ಇರುತ್ತದೆ.
ರಾಯಚೂರು, ಆಗಸ್ಟ್ 07: ಭುಜದ ಮೇಲೆ ಮೃತದೇಹ ಹೊತ್ತು ಗ್ರಾಮಸ್ಥರು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯನ್ನು ದಾಟಿದ ಘಟನೆಯೊಂದು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ. ಮಾರೆಮ್ಮಾ(84) ಎಂಬ ವೃದ್ಧೆ ಮೃತಪಟ್ಟಿದ್ದು, ಜನರು ಅಂತ್ಯಸಂಸ್ಕಾರಕ್ಕೆ (Funeral) ಪರದಾಡಿದ್ದಾರೆ. ಮುಕ್ಕುಂದ ಗ್ರಾಮದಲ್ಲಿ ಸಾರ್ವಜನಿಕ ರುದ್ರ ಭೂಮಿ ಇಲ್ಲದ ಹಿನ್ನೆಲೆ ತುಂಗಭದ್ರಾ ನದಿಯಲ್ಲಿರುವ ನಡುಗಡ್ಡೆಯಲ್ಲಿ ಗ್ರಾಮಸ್ಥರಿಂದ ಮೃತರ ಅಂತ್ಯ ಸಂಸ್ಕಾರ ಮಾಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.