ಕೆಜಿಎಫ್ ನಗರಸಭೆ ಅಧಿಕಾರಿಗಳಿಂದ ಸ್ವೀಟ್ ಅಂಗಡಿಗಳ ಮೇಲೆ ದಾಳಿ; ಕ್ಯಾನ್ಸರ್ ಕಾರಕ ಕಲರ್ ಬಳಸಿ ತಯಾರು ಮಾಡಿದ್ದ ಸಿಹಿ ತಿಂಡಿಗಳು ವಶಕ್ಕೆ
ಗೋಬಿ ಮಂಜೂರಿ, ಕಬಾಬ್ ಆಯ್ತು, ಈಗ ಸ್ವೀಟ್ ಅಂಗಡಿಗಳ ಮೇಲೆ ದಾಳಿ ಮಾಡಿದ ಕೆಜಿಎಫ್ ನಗರಸಭೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ವೇಳೆ ಕ್ಯಾನ್ಸರ್ ಕಾರಕ ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು. ಜೊತೆಗೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ.
ಕೋಲಾರ, ಜು.04: ಕೆಜಿಎಫ್ ನಗರಸಭೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಇಂದು(ಗುರುವಾರ) ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಕ್ಯಾನ್ಸರ್ ಕಾರಕ ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು. ಜೊತೆಗೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ. ಇನ್ನು ಅಧಿಕಾರಿಗಳು, ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದು ಕಸದ ಲಾರಿಗೆ ತುಂಬಿಸಿದ್ದಾರೆ.
ಇತ್ತೀಚೆಗಷ್ಟೇ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಜೂರಿ, ಕಬಾಬ್ ಸೆಂಟರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವುಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಐಟಂಗಳನ್ನು ಬ್ಯಾನ್ ಮಾಡಿದ್ದರು. ಜೊತೆಗೆ ಕಲರ್ ಬಳಸುವ ಎಲ್ಲಾ ಗೋಬಿ ಮಂಚೂರಿ, ಕಬಾಬ್ ಸೆಂಟರ್ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ