ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ: ಸಿಡಿದೆದ್ದೆ ಕರವೇ

Edited By:

Updated on: May 06, 2026 | 7:22 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಪ್ರಮೋಷನ್ ಪರೀಕ್ಷೆಯ ಅಧಿಸೂಚನೆಯಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಪರೀಕ್ಷೆಗಳನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಡೆಸಲು ನಿರ್ಧರಿಸಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ವೇದಿಕೆ ಧ್ವನಿ ಎತ್ತಿದೆ.

ಬೆಂಗಳೂರು, ಮೇ 06: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಹೊರಡಿಸಿರುವ ಎಲ್​ಡಿಸಿಇ ಪ್ರಮೋಷನ್ ಪರೀಕ್ಷೆಗಳ ಅಧಿಸೂಚನೆಯಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ನೋಟಿಫಿಕೇಶನ್​​ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಅಂದರೆ, ರಾಜ್ಯಾದ್ಯಂತ ರೈಲುಗಳನ್ನು ಸಂಚಾರ ‌ಮಾಡಲು ಬಿಡುವುದಿಲ್ಲ. ರಾಜ್ಯದ ಎಲ್ಲಾ ರೈಲ್ವೆ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಈ ವಿಚಾರವನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 06, 2026 07:21 PM
Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More