ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೆ ಸಿಬ್ಬಂದಿ: ವಿಡಿಯೋ ನೋಡಿ

Edited By:

Updated on: Aug 19, 2024 | 11:10 PM

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿ ಓರ್ವ ಆಯತಪ್ಪಿ ಕೆಳಗೆ ಬಿದಿದ್ದು, ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಸದ್ಯ ರೈಲ್ವೆ ಭದ್ರತಾ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋ ನೋಡಿ.

ಮಂಗಳೂರು, ಆಗಸ್ಟ್​ 19: ಚಲಿಸುತ್ತಿದ್ದ ರೈಲು (train) ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಚಾವ್ ಮಾಡಿರುವಂತಹ ಘಟನೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿಂದ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲು ಹೊರಟ್ಟಿದೆ. ಈ ವೇಳೆ ಚಲಿಸುತ್ತಿದ್ದ ಎಕ್ಸ್​​ಪ್ರೆಸ್ ರೈಲು ಹತ್ತಲು ಯತ್ನಿಸಿದ್ದ ಪ್ರಯಾಣಿಕ ಸಸಾಂಗ್​ ರೈಲು ಹತ್ತುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ರೈಲು ಮತ್ತು ಪ್ಲಾಟ್​​​ಫಾರ್ಮ್ ಮಧ್ಯೆ ಸಿಲುಕಿಕೊಂಡಿದ್ದಾರೆ. ತಕ್ಷಣ ಸಸಾಂಗ್​ನನ್ನ ಆರ್​ಪಿಎಫ್​ ಹೆಡ್​ಕಾನ್ಸ್​ಟೇಬಲ್​ ಕೈ ಹಿಡಿದು ಎಳೆದು ಪ್ರಾಣ ರಕ್ಷಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More