AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Alert in Udupi: ಉಡುಪಿಯಲ್ಲಿ ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ನದಿಗಳು, ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

Red Alert in Udupi: ಉಡುಪಿಯಲ್ಲಿ ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ನದಿಗಳು, ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 05, 2023 | 12:43 PM

Share

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಕೆಲದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಉದ್ಯಾವರದ ಮೂಲಕ ಹರಿಯುವ ಪಾಪನಾಶಿನಿ ನದಿ (Papanasini River) ಮತ್ತು ಹಿರಿಯಡ್ಕದ ಮೂಲಕ ಹರಿಯುವ ಸುವರ್ಣ ನದಿ (Suvarna River) ತುಂಬಿ ಹರಿಯುತ್ತಿವೆ. ಟಿವಿ9 ಕನ್ನಡ ವಾಹಿನಿ ಉಡುಪಿ ವರದಿಗಾರ ಪ್ರಜ್ವಲ್ ಅಮೀನ್ ಜಿಲ್ಲೆಯ ಮಳೆಯಿಂದ ಉಂಟಾಗಿರುವ ಸ್ಥಿತಿಯ ಬಗ್ಗೆ ಪ್ರತ್ಯಕ್ಷ ವಿವರಣೆ ನೀಡಿದ್ದಾರೆ. ಜಿಲ್ಲಾಡಳಿತ ಈಗಾಗಲೇ ರೆಡ್ ಅಲರ್ಟ್ (Red Alert) ಘೋಷಿಸಿದೆ ಮತ್ತು ಶಾಲಾ ಕಾಲೇಜುಗಳನ್ನು ಮುಚ್ಚುವ ಆದೇಶ ಹೊರಡಸಿದೆ. ಕಳೆದೆರಡು ಮೂರು ದಿನಗಳಿಂದ ಜೋರಾಗಿ ಬೀಸುತ್ತಿದ್ದ ಗಾಳಿಯ ಅಬ್ಬರ ಕಡಿಮೆಯಾಗಿದೆಯಾದರೂ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಕೆಲದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಭಾಗದ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.