Belagavi News: ಪಶ್ಚಿಮ ಘಟ್ಟದಲ್ಲಿ ನಿಲ್ಲದ ಮಳೆ, ಅಪಾಯಮಟ್ಟ ಮೀರಿ ಹರಿಯುತ್ತಿರುವ ಘಟಪ್ರಭಾ ನದಿ, ಸೇತುವೆ ಜಲಾವೃತ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯ ಉಪನದಿಯಾಗಿರುವ ಘಟಪ್ರಭಾ ಉಕ್ಕಿ ಹರಿಯುತ್ತಿದೆ.
ಬೆಳಗಾವಿ: ಕಿತ್ತೂರು ಕರ್ನಾಟಕ ಪ್ರಾಂತ್ಯದಲ್ಲಿ ಮಳೆ ಮುಂದುವರಿದಿದೆ. ಜಿಲ್ಲೆಯ ಹರಿದು ಹೋಗುವ ಘಟಪ್ರಭಾ ನದಿ (Ghataprabha River) ಉಕ್ಕಿ ಹರಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯೊಂದು (bridge) ಸಂಪೂರ್ಣವಾಗಿ ಜಲಾವೃತಗೊಂಡಿದೆ (submerged) ಅಂದರೆ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದು ಮೂಡಲಗಿ ತಾಲ್ಲುಕಿನಲ್ಲಿರುವ ಸುಣದೋಳಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯಾಗಿದ್ದು ಮೂಡಲಗಿ ಮತ್ತು ಸುಣಧೋಳಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆಯೂ ಹೌದು. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯ ಉಪನದಿಯಾಗಿರುವ ಘಟಪ್ರಭಾ ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಮೂಲಕ ಹರಿದುಹೋಗುವ ಮತ್ತೊಂದು ನದಿ ಮಲಪ್ರಭಾದಲ್ಲೂ (Malaprabha) ಸಾಕಷ್ಟು ನೀರು ಹರಿದು ಬಂದಿದೆ ಮತ್ತು ಅದು ಕೂಡ ಅಪಾಯಮಟ್ಟ ಮೀರಿ ಹರಿಯುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos