ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಗಂಗಾವಳಿ ನದಿ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 13, 2022 | 11:04 AM

ಕಾರವಾರ ಜಿಲ್ಲೆಯಲ್ಲಿ ಹರಿಯುವ ಗಂಗಾವಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಮತ್ತು ಅದಕ್ಕೆ ಅಡ್ಡಲಾಗಿ ಕಟ್ಟಿರುವ ಪಣಸಗುಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಕಾರವಾರ: ಕಳೆದ 3-4 ದಿನಗಳಿಂದ ಬೆಂಗಳೂರಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ ಮತ್ತು ನೀರು ಮನೆಗಳಿಗೆ ನುಗ್ಗಿದ್ದರಿಂದ ಹೋಟೆಲ್ ಗಳಲ್ಲಿ ವಾಸಮಾಡಲಾರಂಭಿಸಿದ್ದ ಪ್ರತಿಷ್ಠಿತ ಬಡಾವಣೆಗಳ ನಿವಾಸಿಗಳು ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗುತ್ತಿದ್ದಾರೆ. ಅದು ಸರಿ, ಆದರೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಾತ್ರ ಆಕಾಶಕ್ಕೆ ತೂತು ಬಿದ್ದಿದೆಯೇನೋ ಎಂಬಂತೆ ಮಳೆ ಸುರಿಯುತ್ತಿದೆ. ವಿಡಿಯೋದಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಕಾರವಾರ (Karwar) ಜಿಲ್ಲೆಯಲ್ಲಿ ಹರಿಯುವ ಗಂಗಾವಳಿ (Gangavali) ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಮತ್ತು ಅದಕ್ಕೆ ಅಡ್ಡಲಾಗಿ ಕಟ್ಟಿರುವ ಪಣಸಗುಳಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.

Follow us on