ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಮಾಗುಂಡಿ ಸೇತುವೆ ಮುಳುಗಡೆ, 15ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

|

Updated on: Jul 18, 2024 | 5:58 PM

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಅವಾಂತರಗಳನ್ನೇ ಸೃಷ್ಟಿಸಿ ಜೀವ ಭಯವನ್ನ ಮೂಡಿಸಿದ. ನೋಡ ನೋಡುತ್ತಿದ್ದಂತೆ ಮನೆಗಳು ಕುಸಿದು ಬೀಳುತ್ತಿದ್ರೆ, ತುಂಗಭದ್ರಾ, ಹೇಮಾವತಿ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಮಾಗುಂಡಿ ಸೇತುವೆ ಮುಳುಗಡೆಯಾಗಿ, 15ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಚಿಕ್ಕಮಗಳೂರು, ಜು.18: ಚಿಕ್ಕಮಗಳೂರು(Chikkamagaluru) ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದೆ. ಈ ಹಿನ್ನಲೆ ವರುಣಾರ್ಭಟಕ್ಕೆ ಎನ್​ಆರ್​ ಪುರ ತಾಲೂಕಿನ ಮಾಗುಂಡಿ ಸೇತುವೆ ಮುಳುಗಡೆಯಾಗಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಘಟ್ಟಗಳ ಸಾಲಿನಲ್ಲಿ ಭಾರೀ ಮಳೆ ಹಿನ್ನೆಲೆ ಮಳೆ ನೀರು ಹರಿದು ಬರುತ್ತಿದ್ದು, ರಭಸವಾಗಿ ಹರಿಯುತ್ತಿರುವ ನೀರಿನಿಂದ ಅವಾಂತರ ಸೃಷ್ಟಿಯಾಗಿದೆ. ಜೊತೆಗೆ ಕಳಸ – ಬಾಳೆಹೊನ್ನೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ. ಇನ್ನು ಮಾಗುಂಡಿ ಸೇತುವೆ ಮುಳುಗಡೆ ಹಿನ್ನೆಲೆ ‌15 ಕ್ಕೂ ಅಧಿಕ‌ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದ್ದು, ಮಳೆ ಮುಂದುವರೆದರೆ ಮಾಗುಂಡಿ ಗ್ರಾಮದಲ್ಲಿ ನೆರೆ ಆತಂಕ ಶುರುವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, NR ಪುರ, ಮೂಡಿಗೆರೆ ಕಳಸ ತಾಲೂಕಿನಾದ್ಯಂತ ಧಾರಾಕಾರವಾಗಿ ಕಳೆದ ಮೂರು ದಿನಗಳಿಂದ ಮಳೆ‌ ಸುರಿಯುತ್ತಿದ್ದು, ಮಳೆ ಮಲೆನಾಡು ಭಾಗದ ಜನರ ಬದುಕನ್ನ ಅಸ್ತವ್ಯಸ್ತ ಮಾಡಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ