Mangaluru news: ಬೆಳ್ತಂಗಡಿಯ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ, ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ (Gadaikallu) ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಸ್ಥಳೀಯರು ತಮ್ಮ ಮೊಬೈಲ್ ಮೂಲಕ ವಿಡಿಯೋ ಮಾಡಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದೆ.
ಇದನ್ನೂ ಓದಿ: Raichur News: ನಾನ್ ರೊಕ್ಕ ಕೊಡಂಗಿಲ್ಲ ಅಂದ್ರೆ ಕೊಡಂಗಿಲ್ಲ; ಸಾರಿಗೆ ಬಸ್ ಕಂಡೆಕ್ಟರ್ ಜೊತೆ ಅಜ್ಜಿ ಕಿರಿಕ್
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: May 23, 2023 07:03 PM