ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಬೈಕ್‌, ಆಟೋ ಚಾಲಕರು ಪರದಾಟ

Updated on: May 01, 2026 | 10:32 PM

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಗೊಟ್ಟಿಗೆರೆ, ಪುಟ್ಟೇನಹಳ್ಳಿ ಮತ್ತು ಬನ್ನೇರುಘಟ್ಟ ರಸ್ತೆ ಸುತ್ತಮುತ್ತ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ತಮ್ಮ ವಾಹನಗಳಲ್ಲಿ ಸಂಚರಿಸಲು ತೀವ್ರ ಪರದಾಟ ನಡೆಸಬೇಕಾಯಿತು. ರಸ್ತೆಗಳು ಕೆರೆಯಂತೆ ಕಾಣುತ್ತಿದ್ದು, ಮಳೆನೀರು ಮನೆಗಳಿಗೂ ನುಗ್ಗಿದೆ.

ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More