ಗಣೇಶ ಹಬ್ಬದಂದು ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: ಸಿಟಿ ಮತ್ತಷ್ಟು ಕೂಲ್ ಕೂಲ್
ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಸೈಲೆಂಟ್ ಆಗಿದ್ದ ಮಳೆರಾಯ ಇಂದು (ಆಗಸ್ಟ್ 27) ಗಣೇಶ ಹಬ್ಬದಂದೇ ಅಬ್ಬರಿಸಿದ್ದಾನೆ. ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಲಾಲ್ ಬಾಗ್, ವಿಲ್ಸನ್ ಗಾರ್ಡನ್ ಸೇರಿದಂತೆ ನಗರದ ಹಲವು ಏರಿಯಾಗಳಲ್ಲಿ ಮಳೆಯಾಗಿದ್ದು, ಗುಂಡಿಗಳಲ್ಲಿ ಮಳೆ ನಿಂತು ರಸ್ತೆಗಳು ಕೆರೆಗಳಾಗಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಹೈರಾಣಾಗಿದ್ದಾರೆ.
ಬೆಂಗಳೂರು, (ಆಗಸ್ಟ್ 27): ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಸೈಲೆಂಟ್ ಆಗಿದ್ದ ಮಳೆರಾಯ ಇಂದು (ಆಗಸ್ಟ್ 27) ಗಣೇಶ ಹಬ್ಬದಂದೇ ಅಬ್ಬರಿಸಿದ್ದಾನೆ. ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಲಾಲ್ ಬಾಗ್, ವಿಲ್ಸನ್ ಗಾರ್ಡನ್ ಸೇರಿದಂತೆ ನಗರದ ಹಲವು ಏರಿಯಾಗಳಲ್ಲಿ ಮಳೆಯಾಗಿದ್ದು, ಗುಂಡಿಗಳಲ್ಲಿ ಮಳೆ ನಿಂತು ರಸ್ತೆಗಳು ಕೆರೆಗಳಾಗಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಹೈರಾಣಾಗಿದ್ದಾರೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಹಗುರ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
