ಮೈಸೂರು ನಗರದಲ್ಲಿ ನಸುಕಿನಿಂದಲೇ ಜಿಟಿಜಿಟಿ ಮಳೆ, ಸಾಮಾನ್ಯ ಜನಜೀವನ ಅಸ್ತವ್ಯಸ್ತ
ಈಗಾಗಲೇ ವರದಿಯಾಗಿರುವಂತೆ ಹವಾಮಾನ ಇಲಾಖೆಯು ಮೈಸೂರು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಿದೆ. ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮೇ 28 ರವರೆಗೆ ಕೇವಲ ಮೈಸೂರು ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಮಳೆಯಾಗುತ್ತಿದ್ದು ಇಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮೇ 26: ಇದು ಮಾನ್ಸೂನ್ ಮಳೆಯೋ ಅಥವಾ ಅರಬ್ಬೀ ಸಮುದ್ರದ ಪೂರ್ವಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಮಳೆಯೋ ಗೊತ್ತಾಗುತ್ತಿಲ್ಲ. ರಾಜ್ಯದ ಬಹುತೇಕ ಭಾಗಗಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ನೀವಿಲ್ಲಿ ನೋಡುತ್ತಿರೋದು ಮೈಸೂರು ನಗರದ (Mysuru city) ದೃಶ್ಯ. ನಸುಕಿನ ಜಾವದಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ ಮತ್ತು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೋರ್ಟ್-ಕಚೇರಿಗಳಿಗೆ ಹೋಗುವವರು ಇನ್ನಿಲ್ಲದ ತಾಪತ್ರಯಗಳಿಗೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳ, ಮಹಾರಾಷ್ಟ್ರದಲ್ಲಿ ಭಾರಿ ಮಳೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ