Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

Updated on: Mar 22, 2026 | 1:11 PM

ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಜಚ್ನಿಯಲ್ಲಿ ಮಣ್ಣು ಕುಸಿತ ಸಂಭವಿಸಿ ಭುಂತರ್-ಮಣಿಕರಣ್ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದೀಗ ಕೋಟ್ಲಿಯಲ್ಲೂ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಮ್ಲಾ, ಮಾರ್ಚ್​ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಜಚ್ನಿಯಲ್ಲಿ ಮಣ್ಣು ಕುಸಿತ ಸಂಭವಿಸಿ ಭುಂತರ್-ಮಣಿಕರಣ್ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದೀಗ ಕೋಟ್ಲಿಯಲ್ಲೂ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More