ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

Updated on: Mar 16, 2026 | 7:28 AM

Karnataka Rains: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ವರ್ಷಧಾರೆಯಾಗಿದ್ದು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಜಿಲ್ಲೆಗಳಲ್ಲಿ ವರ್ಷಧಾರೆ ಸುರಿದಿದೆ. ಚಿಕ್ಕಮಗಳೂರಿನಲ್ಲಿ ಮರ ಉರುಳಿ ಟ್ರಾಫಿಕ್ ಜಾಮ್ ಉಂಟಾಗಿದ್ದರೆ, ಬೀದರ್‌ನಲ್ಲಿ ರಸ್ತೆಗಳಲ್ಲಿ ನೀರು ನಿಂತಿದೆ. ಅಕಾಲಿಕ ಮಳೆಯು ಜನತೆಗೆ ಕೊಂಚ ಸಮಾಧಾನ ತಂದಿದೆ.

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More