Kodagu News: ಕೊಡಗು ಜಿಲ್ಲೆಯಲ್ಲಿ ಮಳೆಯ ರುದ್ರನರ್ತನ, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಅರುಣ್​ ಕುಮಾರ್​ ಬೆಳ್ಳಿ

Updated on: Jul 24, 2023 | 10:58 AM

ಭಾಗಮಂಡಲ ಮತ್ತು ಜಿಲ್ಲಾ ಕೇಂದ್ರ ಮಡಿಕೇರಿ ನಡುವಿನ ರಸ್ತೆ ಸಹ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಮಡಿಕೇರಿ: ಬಿಟ್ಟೆನೆಂದರೂ ಬಿಡದೀ ಮಾಯೆ ಎಂಬಂತಿದೆ ಮಳೆಯ ಆರ್ಭಟ ಕೊಡಗು ಜಿಲ್ಲೆಯಲ್ಲಿ (Kodagu district). ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯತ್ತಿದೆ. ನಾಪೋಕ್ಲು (Napoklu)-ಚೆರಿಯ ಪರಂಬು ಪ್ರದೇಶಗಳು ಜಲಾವೃತಗೊಂಡಿವೆ. ಚೆರಿಯ ಪೆರಂಬು ಗ್ರಾಮಕ್ಕೆ ಪ್ರವಾಸ ಬಂದಿದ್ದ ಕೆಲವರು ಭಾರೀ ಮಳೆಯಂದಾಗಿ ಅಲ್ಲೇ ಸಿಲುಕುವಂತಾಗಿತ್ತು. ರಸ್ತೆಗಳಲೆಲ್ಲ ಜಲಾವೃತಗೊಂಡ (submerged) ಕಾರಣ ಅವರಿಗೆ ಸಾರಿಗೆ ಸಾಧನ ಇಲ್ಲವಾಗಿಬಿಟ್ಟಿತ್ತು. ಸ್ಥಳೀಯರು ತೆಪ್ಪಗಳ ಮೂಲಕ ಅವರನ್ನು ನಾಪೋಕ್ಲುಗೆ ತಂದು ಬಿಟ್ಟಿದ್ದಾರೆ. ಭಾಗಮಂಡಲ ಮತ್ತು ಜಿಲ್ಲಾ ಕೇಂದ್ರ ಮಡಿಕೇರಿ ನಡುವಿನ ರಸ್ತೆ ಸಹ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಮುಂಜಾಗ್ರತೆ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದೆ.

ಮತ್ತಷ್ಟು ವಿಡಿಯೋಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.