ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ, ಯೆಲ್ಲೋ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ
ರಾಜ್ಯಾದಂತ ಮಳೆಯಾಗುತ್ತಿರುವುದು ನಿಜ ಅದರೆ ಬೆಂಗಳೂರು ನಗರ ಪ್ರದೇಶದಲ್ಲಿ ನಿರೀಕ್ಷೆಯ ಮಳೆಯಾಗುತ್ತಿಲ್ಲ. ಕಳೆದ ಶುಕ್ರವಾವ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದಲ್ಲೂ ಚೆನ್ನಾಗಿ ಮಳೆಯಾಗಲಿ ಅಂತ ಎಲ್ಲರೂ ಪ್ರಾರ್ಥಿಸಬೇಕಿದೆ ಅಂತ ಹೇಳಿದ್ದರು.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಿಡಿಲಬ್ಬರದ ಮಳೆ ಮುಂದುವರಿದಿದೆ. ಕೆಲವೆಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ದೃಶ್ಯಗಳಲ್ಲಿ ಕಾಣುವ ಹಾಗೆ ಘಟ್ಟಗಳ ಪ್ರದೇಶ ಹಾಗೂ ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಧೋ ಅಂತ ಸುರಿಯಲಾರಂಭಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ ಎಂದು ವರದಿಗಾರ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ: ಕೆಆರ್ಎಸ್, ಕಬಿನಿ ಡ್ಯಾಂಗಳಲ್ಲಿ ಹೆಚ್ಚುತ್ತಿದೆ ನೀರಿನ ಮಟ್ಟ