ಚಿಕ್ಕಮಗಳೂರುನಲ್ಲಿ ನಿಲ್ಲದ ಮಳೆ; ಕಳಸಾ-ಹೊರನಾಡು ನಡುವಿನ ಹೆಬ್ಬಾರೆ ಸೇತುವೆ ಜಲಾವೃತ

ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಮತ್ತು ಕರಾವಳಿ ಪ್ರಾಂತ್ಯದಲ್ಲಿನ ನದಿಗಳು ಉಕ್ಕಿ ಹರಿಯುತ್ತಿರುವುದು ನಿಜವಾದರೂ ಇನ್ನೂ ಪ್ರವಾಹದಂಥ ಸ್ಥಿತಿ ತಲೆದೋರದಿರುವುದು ಸಮಾಧಾನಕರ ಸಂಗತಿ. ಅದರೆ, ನದಿಗಳ ಪಾತ್ರದಲ್ಲಿ ವಾಸ ಮಾಡುವ ಜನ ಎಚ್ಚರಿಕೆಯಿಂದ ಇರಬೇಕೆಂದು ಅಯಾ ಜಿಲ್ಲಾಡಳಿತಗಳು ಸೂಚನೆ ನೀಡಿವೆ.

ಚಿಕ್ಕಮಗಳೂರುನಲ್ಲಿ ನಿಲ್ಲದ ಮಳೆ; ಕಳಸಾ-ಹೊರನಾಡು ನಡುವಿನ ಹೆಬ್ಬಾರೆ ಸೇತುವೆ ಜಲಾವೃತ
|

Updated on: Jul 16, 2024 | 11:26 AM

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳಲ್ಲಿ ಮಳೆ ನಿರಂತರ ಮತ್ತು ಧಾರಾಕಾರವಾಗಿ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲಯಾದ್ಯಂತ ಕಳೆದ ಎರಡು ವಾರಗಳಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ನಿಮಗೆ ದೃಶ್ಯಗಳಲ್ಲಿ ಕಾಣುತ್ತಿರುವ ಹಾಗೆ ಕಳಸವನ್ನು ಹೊರನಾಡುಗೆ ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಸಂಪೂರ್ಣವಾಗಿ ಜಲಾವೃತವವಾಗಿದೆ. ಜಲಾವೃತ ಅಂತ ಹೇಳಿದರೆ ಅದು ಅಂಡರ್ ಸ್ಟೇಟ್​ಮೆಂಟ್ ಅನಿಸಿಕೊಳ್ಳುತ್ತದೆ. ಉಕ್ಕಿ ಹರಿಯುವ ಹಳ್ಳ ಅಥವಾ ನದಿಯ ಹಾಗೆ ಹೆಬ್ಬಾಳೆ ಸೇತವೆ ಗೋಚರಿಸುತ್ತಿದೆ. ನಮ್ಮ ಚಿಕ್ಕಮಗಳೂರು ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಭದ್ರಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿರುವ ಕಾರಣ ನದಿ ಉಕ್ಕಿ ಹರಿಯುತ್ತಿದೆ. ನಾವು ಈಗಾಗಲೇ ವರದಿ ಮಾಡಿರುವ ಹಾಗೆ ಚಿಕ್ಕಮಗಳೂರು ಸೇರಿದಂತೆ ಕರಾವಳಿ ಪ್ರಾಂತ್ಯ ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಶಾಲಾ ಕಾಲೇಜುಗಳಿ ರಜೆ ಘೋಷಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಒಂದು ವಾರ ಸುರಿಯಲಿದೆ ಧಾರಾಕಾರ ಮಳೆ

Follow us