ದಾವಣಗೆರೆ: ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಜನಜೀವನ ಅಸ್ತವ್ಯಸ್ತ
ರಾತ್ರಿ ಧೋ ಅಂತ ಸುರಿದ ಭಾರೀ ಮಳೆಯನ್ನು ಈಗಷ್ಟೇ ಕೊನೆಗೊಂಡಿರುವ ಮಳೆಗಾಲದಲ್ಲೂ ಕಾಣಲಿಲ್ಲ ಎಂದು ಸ್ಥಳೀಯರು ಹೇಳುತ್ತರುವರೆಂದರೆ ಮಳೆಯ ಪ್ರಮಾಣವನ್ನು ನೀವು ಅಂದಾಜಿಸಬಹುದು. ಪ್ರಾಯಶಃ ಸೋಮವಾರ ಬೆಂಗಳೂರು ನಗರದಲ್ಲಿ ಸುರಿದ ಮಳೆಯನ್ನು ನೆನಪಿಸುವಂತಿರಬೇಕು ದಾವಣಗೆರೆಯಲ್ಲಾದ ಮಳೆ!
ದಾವಣಗೆರೆ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಣ್ಣೆನಗರಿ ಎಂದು ಕರೆಸಿಕೊಳ್ಳುವ ದಾವಣೆಗೆರೆಯಲ್ಲಿ ಕಳೆದ ರಾತ್ರಿಯಿಂದ ಒಂದೇಸಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆಯೆಂದು ನಮ್ಮ ವರದಿಗಾರ ಹೇಳುತ್ತಾರೆ. ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಮನೆಯಲ್ಲಿ ಉಳಿದುಕೊಂಡಿರುವಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಂಗಳೂರು ಮಳೆ ಅವಾಂತರ: ತುಂತುರು ಅಲ್ಲಿ ನೀರ ಹಾಡು, ಹಗಲಿನಲಿ, ಇರುಳಿನಲಿ, ಬಿಬಿಎಂಪಿ ಮಲಗಿರಲಿ!
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
