ಮಲೆನಾಡು ಮತ್ತು ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ, ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆ. ಅದರೆ, ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ನಾನಾ ಭಾಗಗಳಲ್ಲಿ ಜೋರು ಮಳೆಯಾಗುತ್ತಿದೆ. ಶಾಲಾ ಕಾಲೇಜುಗಳನ್ನು ಮುಚ್ಚುವ ಪರಿಸ್ಥಿತಿಯೇನೂ ಇಲ್ಲ, ಹಳ್ಳಕೊಳ್ಳಗಳು, ಈ ಭಾಗಗಳ ನದಿಗಳು ತುಂಬಿ ಹರಿಯುತ್ತಿವೆ ಮತ್ತು ಜಲಾಶಯಗಳು ಕೂಡ ಭರ್ತಿಯಾಗಿವೆ.
ಮಂಗಳೂರು, ಜುಲೈ 25: ಆಗಸ್ಟ್ ತಿಂಗಳು ಶುರುವಾಗಲು ಒಂದು ವಾರ ಮಾತ್ರ ಬಾಕಿಯುಳಿದಿದೆ ಅದರೆ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ (coastal Karnataka) ಮಳೆಯ ಅಬ್ಬರ ಕಡಿಮೆಯಾಗುತ್ತಿಲ್ಲ. ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ ಮತ್ತು ಇವತ್ತು ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ಅಂದರೆ ಶುಕ್ರವಾರ ರಜೆ ಘೋಷಿಸಲಾಗಿದೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ನಾಳೆಯ ಹವಾಮಾನ: ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಕೆ, ಈ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

