ಬಿಸಿಲಿನಿಂದ ರೋಸಿಹೋಗಿದ್ದ ಬೆಂಗಳೂರಿಗೆ ತಂಪೆರೆದ ಮಳೆರಾಯ: ವಿಡಿಯೋ ನೋಡಿ
ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮಳೆ ಆಗಿದೆ. ಸಂಜೆಯ ಮಳೆಗೆ ವಾಹನ ಸವಾರರು ಪರದಾಡಿದ್ದು, ಮಳೆಯಲ್ಲಿಯೇ ಮನೆಗಳತ್ತ ತೆರಳಿದ್ದಾರೆ.
ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಹಿನ್ನೆಲೆ ಶುಕ್ರವಾರ ಬೆಂಗಳೂರು ನಗರದ ಹಲವೆಡೆ ಮಳೆ ಆಗಿದೆ. ಮೆಜೆಸ್ಟಿಕ್, ಡಬಲ್ ರೋಡ್, ಲಾಲ್ಬಾಗ್, ಶಾಂತಿನಗರ, ಕೋರಮಂಗಲ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಜಯನಗರ, ರಾಜಾಜಿನಗರ, ಬನಶಂಕರಿ, ವಿಜಯನಗರ ಮತ್ತು ಚಂದ್ರಾಲೇಔಟ್ ಸೇರಿದಂತೆ ನಗರದ ಹಲವೆಡೆ ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಸಂಜೆಯ ಮಳೆಗೆ ವಾಹನ ಸವಾರರು ಪರದಾಡಿದ್ದು, ಮಳೆಯಲ್ಲಿಯೇ ಮನೆಗಳತ್ತ ತೆರೆಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 21, 2023 09:48 PM
Latest Videos