ಬಿಸಿಲಿನಿಂದ ರೋಸಿಹೋಗಿದ್ದ ಬೆಂಗಳೂರಿಗೆ ತಂಪೆರೆದ ಮಳೆರಾಯ: ವಿಡಿಯೋ ನೋಡಿ

Updated on: Apr 21, 2023 | 9:48 PM

ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಮಳೆ ಆಗಿದೆ. ಸಂಜೆಯ ಮಳೆಗೆ ವಾಹನ ಸವಾರರು ಪರದಾಡಿದ್ದು, ಮಳೆಯಲ್ಲಿಯೇ ಮನೆಗಳತ್ತ ತೆರಳಿದ್ದಾರೆ. 

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಹಿನ್ನೆಲೆ ಶುಕ್ರವಾರ ಬೆಂಗಳೂರು ನಗರದ ಹಲವೆಡೆ ಮಳೆ ಆಗಿದೆ. ಮೆಜೆಸ್ಟಿಕ್, ಡಬಲ್ ರೋಡ್, ಲಾಲ್​ಬಾಗ್, ಶಾಂತಿನಗರ, ಕೋರಮಂಗಲ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್​, ಜಯನಗರ, ರಾಜಾಜಿನಗರ, ಬನಶಂಕರಿ, ವಿಜಯನಗರ ಮತ್ತು ಚಂದ್ರಾಲೇಔಟ್ ಸೇರಿದಂತೆ ನಗರದ ಹಲವೆಡೆ ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಸಂಜೆಯ ಮಳೆಗೆ ವಾಹನ ಸವಾರರು ಪರದಾಡಿದ್ದು, ಮಳೆಯಲ್ಲಿಯೇ ಮನೆಗಳತ್ತ ತೆರೆಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 21, 2023 09:48 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More