Video: ಸೋರುತಿಹುದು ನೂತನ ಸಂಸತ್ ಭವನ

Updated on: Aug 01, 2024 | 12:10 PM

ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಾಣವಾಗಿರುವ ಸಂಸತ್​ ಭವನ ಕೂಡ ಸೋರುತ್ತಿದೆ. ಸಂಸತ್​ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ವಿರೋಧ ಪಕ್ಷಗಳು ಹಳೆಯ ಸಂಸತ್ತಿಗೆ ಹೋಲಿಕೆ ಮಾಡಲಾರಂಭಿಸಿವೆ.

ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಾಣವಾಗಿರುವ ಸಂಸತ್​ ಭವನ ಕೂಡ ಸೋರುತ್ತಿದೆ. ಸಂಸತ್​ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ವಿರೋಧ ಪಕ್ಷಗಳು ಹಳೆಯ ಸಂಸತ್ತಿಗೆ ಹೋಲಿಕೆ ಮಾಡಲಾರಂಭಿಸಿವೆ.

ಎಕ್ಸ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಎಸ್​ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.

ಇದೇ ವೇಳೆ ಕಾಂಗ್ರೆಸ್​ ಸಂಸದ ಮಾಣಿಕ್ಕಂ ಠಾಗೋರ್ ಕೂಡ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಹೊರಗೆ ಪೇಪರ್ ಲೀಕ್ ಒಳಗೆ ನೀರು ಲೀಕ್ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ:

ಭಾರಿ ಮಳೆಯಿಂದಾಗಿ ದೆಹಲಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ರಾಬಿನ್ ಚಿತ್ರಮಂದಿರದ ಬಳಿ ಮನೆ ಕುಸಿದು ಒಬ್ಬರು ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ನೈಋತ್ಯ ದೆಹಲಿಯ ವಸಂತ್ ಕುಂಜ್​ನಲ್ಲಿ ಗೋಡೆ ಕುಸಿದು ಮಹಿಳೆ ಗಾಯಗೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More