ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ: ಸಿದ್ದರಾಮಯ್ಯ, ಸಿಎಂ

ಅರುಣ್​ ಕುಮಾರ್​ ಬೆಳ್ಳಿ

Updated on: Apr 30, 2025 | 1:01 PM

ನಮಗೆ ಲಭ್ಯವಿರುವ ಮಾಹಿತಿ ಪ್ರಕಾರ ರವಿವಾರದಂದು ಮಂಗಳೂರಲ್ಲಿ ಒಂದಷ್ಟು ಜನರ ಗುಂಪೊಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಹತ್ಯೆ ಮಾಡಿದೆ. ಹತ್ಯೆಗೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಳು ಸಾಮಾಜಿಕ ಜಾಲತಾಣಗಳಲ್ಲಿ ಗೋಚರಿಸಿದ ಬಳಿಕ ಮಂಗಳೂರು ಪೊಲೀಸರು 15 ಜನರನ್ನು ಬಂಧಿಸಿದ್ದಾರೆ. ಹತ್ಯೆಯಾಗಿರುವ ವ್ಯಕ್ತಿ ಕೇರಳ ಮೂಲದ ದಿನಗೂಲಿ ನೌಕರನಾಗಿದ್ದ ಅನ್ನೋದು ಗೊತ್ತಾಗಿದೆ.

ಬೆಂಗಳೂರು, ಏಪ್ರಿಲ್ 30: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತಾಡಿದರು. ಪಾಕಿಸ್ತಾನ ಪರ ಘೋಷಣೆ (pro Pakistan slogan) ಕೂಗಿದ ವ್ಯಕ್ತಿಯೊಬ್ಬನನ್ನು ಮಂಗಳೂರಲ್ಲಿ ಹತ್ಯೆ ಮಾಡಲಾಗಿದೆ ಎಂದು ಪತ್ರಕರ್ತರೊಬ್ಬರು ಕೇಳಿದಾಗ, ಅವನು ಘೋಷಣೆ ಕೂಗಿದಾಗ ನೀನು ಅಲ್ಲಿದ್ಯಾ? ಎಂದು ಮರು ಪ್ರಶ್ನಿಸಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಅದು ತಪ್ಪು ಮತ್ತು ದೇಶದ್ರೋಹ, ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಎಂಬ ಆರೋಪದಲ್ಲಿ ಒಬ್ಬನನ್ನು ಕೊಲ್ಲಲಾಗಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ವರದಿ ಬಂದ ಬಳಿಕ ನಿಜಾಂಶ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಯಲ್ಲಿ 12 ಮಹಿಳೆಯರಿರುವುದನ್ನು ಕೇಳಿ ಸಂತೋಷಪಟ್ಟ ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.