Rishab Shetty: ರಮ್ಯಾಗೆ ಟಾಂಗ್ ಕೊಟ್ಟ ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ
ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ.
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇಂದು (ಜುಲೈ 21) ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಇದ್ದ ವಿಘ್ನ ಗುರುವಾರ (ಜುಲೈ 20) ಕೊನೆಯಾಗಿತ್ತು. ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ (Rishab Shetty) ಹಾಗೂ ರಾಜ್ ಬಿ ಶೆಟ್ಟಿ ಸಂತಸ ಹೊರಹಾಕಿದ್ದಾರೆ. ‘ನ್ಯಾಯ ಅಂದ್ರೆ ನ್ಯಾಯ ಜೈ ಆಂಜನೇಯ’ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಅವರು, ‘ಬನ್ನಿ ಬನ್ನಿ ಎಲ್ಲೆಲ್ಲಿ ಬೆಂಕಿ ಬೀಳುತ್ತೆ ನೋಡೋಣ’ ಎಂದಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ