ಇಂಥಹಾ ಸಿನಿಮಾ ನೋಡಿರಲಿಲ್ಲ: ‘ಹಾಸ್ಟೆಲ್ ಹುಡುಗರ’ ಕೊಂಡಾಡಿದ ರಾಜ್ ಬಿ ಶೆಟ್ಟಿ

Updated on: Jul 25, 2023 | 11:08 PM

Raj B Shetty: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ವೀಕ್ಷಿಸಿದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಸಿನಿಮಾವನ್ನು ಕೊಂಡಾಡಿದ್ದಾರೆ.

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ತಮ್ಮ ‘ಟೋಬಿ‘ (Toby) ಸಿನಿಮಾವನ್ನು ಬಿಡುಗಡೆ ಅಣಿ ಮಾಡುತ್ತಿದ್ದಾರೆ. ಬೇರೆ ಬೇರೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಹೊಸಬರ ಸಿನಿಮಾ ಆಗಿರುವ ‘ಹಾಸ್ಟೆಲ್ ಹುಡುಗರು’ ಸಿನಿಮಾಕ್ಕೂ ಬಂದು ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಸೆಲೆಬ್ರಿಟಿ ಪ್ರೀಮಿಯರ್ ಶೋ ವೀಕ್ಷಿಸಿದ ರಾಜ್ ಬಿ ಶೆಟ್ಟಿ ‘ಕನ್ನಡದಲ್ಲಿ ಇಂಥಹಾ ಸಿನಿಮಾವನ್ನು ನಾನು ನೋಡಿರಲಿಲ್ಲ. ಈ ರೀತಿಯೂ ಸಿನಿಮಾ ಮಾಡಬಹುದು ಎಂದು ಹೊಸ ಹುಡುಗರು ತೋರಿಸಿಕೊಟ್ಟಿದ್ದಾರೆ ಅವರಿಗೆ ಧನ್ಯವಾದ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More