ಸರ್ಕಾರಕ್ಕೆ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಮಾಡಿದ ಮನವಿ ಏನು?

Updated on: Sep 15, 2023 | 11:28 PM

Raj B Shetty: ಟಿವಿ9 ಆಯೋಜಿಸಿದ್ದ ಶೃಂಗಸಭೆಯಲ್ಲಿ ಸಿನಿಮಾ ಕುರಿತ ಸಂವಾದದಲ್ಲಿ ಭಾಗಿಯಾಗಿದ್ದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ, ಸರ್ಕಾರಕ್ಕೆ ಕೆಲ ಮನವಿಗಳನ್ನು ಮಾಡಿದರು. ಏನದು ಮನವಿ? ಇಲ್ಲಿ ನೋಡಿ...

ಟಿವಿ9 ಆಯೋಜಿಸಿದ್ದ ಶೃಂಗಸಭೆಯಲ್ಲಿ ಸಿನಿಮಾ ಕುರಿತ ಸಂವಾದದಲ್ಲಿ ಭಾಗಿಯಾಗಿದ್ದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty), ಸರ್ಕಾರಕ್ಕೆ ಕೆಲ ಮನವಿಗಳನ್ನು ಮಾಡಿದರು. ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಕೆಳ ವರ್ಗದ ಎಂದು ಗುರುತಿಸಲಾಗಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು, ಜೊತೆಗೆ ಸಿನಿಮಾ ಸೆಟ್​ಗಳಲ್ಲಿ ಅವರಿಗೆ ಅರ್ಹ ಗೌರವ ಧಕ್ಕುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಜೊತೆಗೆ ಚಿತ್ರರಂಗ ಪ್ರವೇಶಿಸಲು ಉತ್ಸುಕರಾಗಿರುವ ಯುವಕರಿಗೆ ಪ್ರಯೋಗಾತ್ಮಕ ತರಬೇತಿ ನೀಡುವ ಯೋಜನೆಯೊಂದನ್ನು ಸರ್ಕಾರ ಪ್ರಾರಂಭ ಮಾಡಬೇಕು ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More