ತೆಲುಗು ವೇದಿಕೆ ಮೇಲೆ ‘ಬಾವ ಬಂದರು..’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
‘ಸು ಫ್ರಮ್ ಸೋ’ ಸಿನಿಮಾ ಈಗ ಆಗಸ್ಟ್ 8ರಂದು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ತೆಲುಗಿನಲ್ಲಿ ಚಿತ್ರ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎಂಬ ಕುತೂಹಲ ಪ್ರೇಕ್ಷಕರನ್ನು ಕಾಡಿದೆ.
‘ಸು ಫ್ರಮ್ ಸೋ’ (Su From So) ಸಿನಿಮಾ ಆಗಸ್ಟ್ 8ರಂದು ತೆಲುಗಿನಲ್ಲಿ ಬಿಡುಗಡೆ ಕಾಣಲಿದೆ. ಈ ಚಿತ್ರದ ಬಗ್ಗೆ ಅಲ್ಲಿನ ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡದವರು ಹೈದರಾಬಾದ್ಗೆ ತೆರಳಿದ್ದಾರೆ. ಅಲ್ಲಿ ವೇದಿಕೆ ಮೇಲೆ ‘ಬಾವ ಬಂದರು..’ ಹಾಡಿಗೆ ತಂಡದವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಮೈತ್ರಿ ಮೂವೀ ಮೇಕರ್ಸ್ ‘ಸು ಫ್ರಮ್ ಸೋ’ ಚಿತ್ರವನ್ನು ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Aug 07, 2025 10:44 AM